ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಐದು ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಆಗಿ ನೀವೇ ಇರುತ್ತೀರಾ ಎಂದು ಬಿಜೆಪಿ ಪ್ರಶ್ನೆ ಮಾಡಿದಾಗ ಹೌದು ಸಿಎಂ ಆಗಿ ನಾನೇ ಇರುತ್ತೇನೆ . ನಾವು ಮತ್ತೆ ಗೆದ್ದು ಬರುತ್ತೇವೆ 5 ವರ್ಷ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.
ವಿಪಕ್ಷ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಇರಲಿ ಎಂದು ನಾವು ಬಯಸುತ್ತೇವೆ. ಆದರೆ ಇದೀಗ ರಾಜ್ಯದಲ್ಲಿ ಪವರ್ ಶೇರಿಂಗ್ ವಿಚಾರವಾಗಿ ಅನೇಕ ಕಾಂಗ್ರೆಸ್ ನಾಯಕರೇ ಅಧಿಕಾರ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿದ್ದಾರೆ ಎಂದು ಆರ್ ಹೇಳಿಕೆ ನೀಡಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ ಹೌದಪ್ಪ ನಾನೇ ಮುಂದಿನ ಐದು ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದರು.