ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ: NEET ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಪರೀಕ್ಷೆಯಲ್ಲಿನ ಅಕ್ರಮಗಳು 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಾಳುಮಾಡಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನೀಟ್​-ಯುಜಿ ವೈದ್ಯಕೀಯ ಪ್ರವೇಶ ವಿವಾದದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಸಂಸತ್ತಿನಲ್ಲಿ ದೇಶದ ವಿದ್ಯಾರ್ಥಿಗಳ ಧ್ವನಿಯಾಗುತ್ತೇನೆ ಮತ್ತು ಅವರ ಭವಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಬಲವಾಗಿ ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದರು.

ಮೋದಿಯವರು ನೂತನ ಅವಧಿಗೆ ಅಧಿಕಾರ ಸ್ವೀಕರಿಸುವ ಮುನ್ನವೇ ಪರೀಕ್ಷೆಯಲ್ಲಿನ ಅವ್ಯವಹಾರಗಳು 24 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹತಾಶಗೊಳಿಸಿವೆ. ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗುತ್ತೇನೆ ಮತ್ತು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಮುಖವಾಗಿ ಎತ್ತುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಒಂದೇ ಪರೀಕ್ಷಾ ಕೇಂದ್ರದಿಂದ ಆರು ವಿದ್ಯಾರ್ಥಿಗಳು ಗರಿಷ್ಠ ಅಂಕಗಳೊಂದಿಗೆ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿದ್ದು, ಹಲವರು ತಾಂತ್ರಿಕವಾಗಿ ಸಾಧ್ಯವಿಲ್ಲದ ಅಂಕಗಳನ್ನು ಪಡೆದಿದ್ದಾರೆ. ಆದರೆ ಸರ್ಕಾರವು ಪ್ರಶ್ನೆಪತ್ರಿಕೆ ಸೋರಿಕೆಯನ್ನು ನಿರಂತರವಾಗಿ ನಿರಾಕರಿಸುತ್ತಿದೆ. ಶಿಕ್ಷಣ ಮಾಫಿಯಾ ಮತ್ತು ಸರ್ಕಾರಿ ಯಂತ್ರದೊಂದಿಗೆ ಶಾಮೀಲಾಗಿ ನಡೆಯುತ್ತಿರುವ ಈ ಪ್ರಶ್ನೆಪತ್ರಿಕೆ ಸೋರಿಕೆ ಉದ್ಯಮವನ್ನು ಎದುರಿಸಲು ಕಾಂಗ್ರೆಸ್ ಸದೃಢ ಯೋಜನೆಯನ್ನು ಹೊಂದಿತ್ತು. ಕಾನೂನು ತರುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮುಕ್ತಿ ನೀಡುವುದಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದ್ದೆವು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!