ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಶಾಸಕ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಯತ್ನ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನನ್ನ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ. ಪಕ್ಷ ಸಂಘಟನೆ ಮಾಡಿ, ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ಆ ನಿಟ್ಟಿನಲ್ಲಿ ನಾನು ಸಾಕಷ್ಟು ಹೋರಾಟ ಮಾಡುತ್ತಿದ್ದೇನೆ ಎಂದರು.