ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಬುಧವಾರ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದಾದ ಬಳಿಕ ಇದೀಗ ಬಳ್ಳಾರಿಯಲ್ಲಿ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಬಿಜೆಪಿ ಜೆಡಿಎಸ್ ನವರು ಮುಗಿಸುವುದಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಮುಗಿಸಿದರೇ ಕಾಂಗ್ರೆಸ್ ಮುಗಿಸಿದಂತೆ ಅಂದುಕೊಂಡಿದ್ದಾರೆ. ಆದರೆ ಆಶೀರ್ವಾದ ಇರುವವರೆಗೂ ನನ್ನನ್ನು ಮುಗಿಸುವುದಕ್ಕೆ ಆಗಲ್ಲ ಎಂದರು.
ಬಿಜೆಪಿ ನಾಯಕರು ಬಣ್ಣದ ಮಾತುಗಳಿಗೆ ನೀವು ಮರುಳಾಗಬೇಡಿ ನನ್ನ ಮತ್ತು ಶಾಸಕ ಬಿ. ನಾಗೇಂದ್ರ ವಿರುದ್ಧ ಸುಳ್ಳು ಕೇಸ್ ಹಾಕಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಟೀಕೆ ಮಾಡಿದವರನ್ನು ಮುಗಿಸಲು ಹೊರಟಿದ್ದಾರೆ.ಅನ್ನಪೂರ್ಣ ಗೆದ್ದರೆ ತುಕಾರಾಮ ಮಾಡಿದ ಕೆಲಸ ಮುಂದುವರಿಸುತ್ತಾರೆ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಅವರಿಗೆ ಸುಳ್ಳು ಹೇಳುವುದು ಬಿಟ್ಟರೆ ಏನು ಬರಲ್ಲ. 2023ರ ಚುನಾವಣೆಯಲ್ಲಿ 136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಅಧಿಕಾರಕ್ಕೆ ಬಂದ ಒಂದೇ ದಿನದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮಹಿಳೆಯರು ಶಕ್ತಿ ಯೋಜನೆಯ ಅಡಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಗೃಹಜೋತಿ ಯೋಜನೆ ಅಡಿ 1.61 ಕುಟುಂಬಕ್ಕೆ ಉಚಿತ ವಿದ್ಯುತ್ ಪೂರೈಕೆ ಆಗುತ್ತಿದೆ. ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜನಾರ್ದನ ರೆಡ್ಡಿ ಇಂತಹ ಯೋಜನೆಗಳನ್ನು ಕೊಟ್ಟಿದ್ರಾ? ಎಂದು ಪ್ರಶ್ನಿಸಿದ್ದಾರೆ.
ಆದರೂ ಕಾಂಗ್ರೆಸ್ ಪಕ್ಷವನ್ನು ಬೈದುಕೊಂಡು ತಿರುಗಾಡುತ್ತಿದ್ದಾರೆ. ಹಣ ಕೊಟ್ಟು ಮತ ಹಾಕಿಸಿಕೊಳ್ಳುತ್ತಾರೆ ಆದರೆ ಜನರ ಬಳಿ ಇದ್ದವರು ಗೆಲ್ಲಲ್ಲ. 8 ದಿನ ಜನರ ಬಳಿ ಇದ್ದವರೇ ಗೆಲ್ಲೋದು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಎಚ್ ಡಿ ಕುಮಾರಸ್ವಾಮಿಯೇ ಈ ಮಾತು ಹೇಳಿದ್ದಾರೆ. 2018 ರ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತು.
600 ಭರವಸೆ ಘೋಷಿಸಿ ಅದರಲ್ಲಿ 10% ಕೂಡ ಜಾರಿ ಮಾಡಿಲ್ಲ ಮೊದಲ ಕ್ಯಾಬಿನೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಅಂದಿದ್ದರು. ಬಿಜೆಪಿಯವರು ರೈತರ ಸಾಲ ಮನ್ನಾ ಮಾಡಿದ್ರಾ ಎಂದು ವಾಗ್ದಾಳಿ ನಡೆಸಿದರು. ಸಂಡೂರು ತಾಲೂಕಿನಲ್ಲಿ 22 ಕೋಟಿ ಸಾಲ ಮನ್ನಾ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.