ಹೊಸದಿಗಂತ ಡಿಜಿಟಲ್ ಡೆಸ್ಕ್;
ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಮುಂದಿನ ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ, ನಿಮಗೆ ಯಾಕೆ ಅನುಮಾನ? ಯಾಕೆ ಮತ್ತೆ ಮತ್ತೆ ಅದನ್ನ ಕೇಳುತ್ತೀರಾ? ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ಯಾ? ನಾಯಕತ್ವ ಬದಲಾವಣೆ ಸಂಪುಟ ಪುನಾರಚನೆ ಎಲ್ಲದನ್ನ ತೀರ್ಮಾನ ಮಾಡುವುದು ಹೈಕಮಾಂಡ್. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಏನಾದರು ಮಾತನಾಡಿದ್ಯಾ? ಇಲ್ಲ ತಾನೇ, ಹಾಗಾದ್ರೆ ಮತೆ ಯಾಕೆ ಆ ಪ್ರಶ್ನೆ. ಹೈಕಮಾಂಡ್ ಹೇಳುವುದನ್ನ ನಾನು, ಶಾಸಕರು ಪಾಲಿಸಬೇಕು ಎಂದು ತಿಳಿಸಿದರು.
ಶಾಸಕರು, ಸಚಿವರು ದೆಹಲಿಗೆ ಹೋಗಬಾರದಾ? ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮತ್ತೆ ನಾನು ಯಾಕೆ ಈ ಬಗ್ಗೆ ವಿವರಣೆ ಕೊಡಲಿ. ನಾಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡ್ತೀನಿ ಎಂದರು.
ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ನಡೆದುಕೊಳ್ಳುತ್ತಾರೆ ಎಂಬ ಡಿ.ಕೆ ಸುರೇಶ್ ಹೇಳಿಕೆ ವಿಚಾರವಾಗಿ ಮಾತನಾಡಿ, ಹೌದು.. ನಾನು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಕೊಟ್ಟ ಮಾತಿನಂತೆ ಗ್ಯಾರಂಟಿ ಜಾರಿ ಮಾಡಿದ್ದೇನೆ. ಜನರಿಗೆ ಕೊಟ್ಟ ಆಶ್ವಾಸನೆ ಈಡೇರಿಸಿದ್ದೇನೆ ಎಂದು ಡಿಕೆ ಬ್ರದರ್ಸ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

