ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರನೇ ಬಾರಿಗೆ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಪಂದ್ಯದ ನಂತರ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಊಹಾಪೋಹಗಳಿಗೆ ಬ್ರೇಕ್ ಹಾಕಿದ್ದಾರೆ.
ಟೂರ್ನಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಏಕದಿನ ಕ್ರಿಕೆಟ್‌ನಿಂದ ಸದ್ಯಕ್ಕೆ ನಿವೃತ್ತಿಯಾಗಲ್ಲ. ದಯವಿಟ್ಟು ವದಂತಿಗಳನ್ನು ಹರಡಬೇಡಿ. ಭವಿಷ್ಯದ ಬಗ್ಗೆ ಭವಿಷ್ಯದಲ್ಲೇ ನಿರ್ಧರಿಸುತ್ತೇನೆ’ ಎಂದು ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
AN IMPORTANT UPDATE FROM ROHIT! 😁#ChampionsTrophyOnJioStar #RohitSharma #ChampionsTrophy2025 pic.twitter.com/6cMNsCFPAi
— Star Sports (@StarSportsIndia) March 9, 2025