ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ನೋದಲ್ಲಿ ಸರ್ಕಾರಿ ವೈದ್ಯಕೀಯ ಸಂಸ್ಥೆಗೆ ಸಂಬಂಧಿಸಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಂಟರ್ನ್ ವೈದ್ಯನೊಬ್ಬ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದು, ಬಳಿಕ ಮದುವೆಗೆ ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ವಿದ್ಯಾರ್ಥಿನಿಯ ದೂರಿನ ಮೇರೆಗೆ ಕೈಸರ್‌ಬಾಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯು ಮದುವೆಯ ಭರವಸೆ ನೀಡಿ ಹಲವು ಬಾರಿ ದೈಹಿಕ ಸಂಬಂಧ ಹೊಂದಿದ್ದಾನೆ. ನಂತರ ಮದುವೆಗೆ ಒತ್ತಾಯಿಸಿದಾಗ, ಆರೋಪಿ ಸ್ಪಷ್ಟವಾಗಿ ನಿರಾಕರಿಸಿದ್ದು, ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಇಂಟರ್ನ್ ವೈದ್ಯನ ಹಿನ್ನೆಲೆ, ವಿಳಾಸ ಹಾಗೂ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ. ಸಂತ್ರಸ್ತೆಯ ಹೇಳಿಕೆಯನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು. ಆರೋಪಿಯನ್ನು ಬಂಧಿಸಲು ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

