ನಾನು ನನ್ನ ಪತ್ನಿ ಕುಟುಂಬದ ಜೊತೆ ಅಯೋಧ್ಯೆಗೆ ಹೋಗ್ತೇವೆ: ಎಚ್.ಡಿ.ದೇವೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ನನ್ನ ಪತ್ನಿ, ಕುಮಾರಸ್ವಾಮಿ ಅವರ ಪತ್ನಿ ಅನಿತಾ ಹಾಗು ನಿಖಿಲ್‌ ಹೋಗ್ತೇವೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ತಿಳಿಸಿದರು.

ಜನವರಿ 22 ಕ್ಕೆ ವಿಶೇಷ ವಿಮಾನ ಮಾಡಿದ್ದಾರೆ ಅದರಲ್ಲೆ ಹೋಗ್ತೇವೆ. ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇವೆ ಎಂದು ದೇವೇಗೌಡರು ಹೇಳಿದರು.

ರಾಜ್ಯ ಸರ್ಕಾರ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆ ನಿರ್ಣಯ ಮಾಡಿ ಕೇಂದ್ರಕ್ಕೆ ಕಳಿಸಿದೆ. ಒಕ್ಕಲಿಗರಿಗೆ ಕೊಟ್ಟಿದ್ದ ಮೀಸಲಾತಿ ಕೋಟಾ ಕಡಿಮೆ ಮಾಡಿ ಮುಸ್ಲಿಂರಿಗೆ ಕೊಟ್ಟಿದ್ದು ನಾನು. ಮಲ್ಲಿಕಾರ್ಜುನ ಖರ್ಗೆ ಅವರು ಸಂವಿಧಾನ ಕೊಟ್ಟ ಮೀಸಲಾತಿ ಭರ್ತಿಮಾಡಲು ಆಗದಿದ್ದಾಗ ಉದ್ಯೋದದಲ್ಲಿ ಪದೋನ್ನತಿ ಬಗ್ಗೆ ಜಾರಿ ಮಾಡಲು ಕೇಳಿದ್ರು. ಶೇಕಡಾ 15 ಎಸ್ ಸಿಗಳಿಗೆ, ಶೇಕಡಾ 3 ಎಸ್ಟಿಗಳಿಗೆ ಮೀಸಲಾತಿ ಇತ್ತು. ಆದರೆ ಉದ್ಯೋಗದಲ್ಲಿ ಈ ಮೀಸಲಾತಿ ಪ್ರಮಾಣ ತಲುಪದೆ ಹೋದಾಗ ನಾನು ಅದನ್ನ ಸೇಕಡಾ 15 ರಿಂದ 18 ಕ್ಕೆ ಶೇಕಡಾ 3 ರಿಂದ 5 ಕ್ಕೆ ಏರಿಸಿದೆ.

ಇದೆಲ್ಲವನ್ನೂ ಕೂಡ ನಾನು ಸಿಎಂ ಆಗಿದ್ದ ಅವದಿಯಲ್ಲಿ ಮಾಡಿದೆ. ಮೀಸಲಾತಿ ಬಗ್ಗೆ ತಮ್ಮ ಅವಧಿಯಲ್ಲಿ ಕೈಕೊಂಡ ತೀರ್ಮಾನಗಳ ಬಗ್ಗೆ ದೇವೇಗೌಡರು ಸ್ಮರಿಸಿದರು. ಅಂದು ಶೇಕಡ 23 ತೀರ್ಮಾನ ಮಾಡಿದ್ದು ಈಗಲೂ ಜಾರಿಯಲ್ಲಿ ಇದೆ. ಒಳ ಮೀಸಲಾತಿ ಬಗ್ಗೆ ಈಗ ಸರ್ಕಾರ ಕೇಂದ್ರಕ್ಕೆ ಕಳಿಸಿದೆ. ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರೊ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬ ಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ ಮಂಡಿಸಿದ್ರು. ಆಗ ಖರ್ಗೆ ಅವರು ಆಗ ವಿಪಕ್ಷದ ನಾಯಕರಾಗಿದ್ದರು ಎಂದರು.

ನನ್ನ ರಾಜಕೀಯ ಜೀವನದಲ್ಲಿ 60 ವರ್ಷ ದುಡಿದಿದ್ದೇನೆ. ಯಾವ ಯಾವ ಸಮುದಾಯಕ್ಕೆ ಮೀಸಲಾತಿ ಲಾಭ ಆಗಿದೆ. ಇದರ ಲಾಭವನ್ನು ಯಾರು ಪಡೆದಿದ್ದಾರೆ ಚರ್ಚೆ ಆಗಬೇಕು ಎಂದು ಒತ್ತಾಯ ಮಾಡಿದರು. ಒಳ‌‌ ಮೀಸಲಾತಿ ವಿಚಾರವನ್ನು ಕೇಂದ್ರಕ್ಕೆ ಹೊತ್ತುಹಾಕೊ‌ ಕೆಲಸ ಮಾಡಿದ್ದಾರೆ. ಇದನ್ನೇ ಮುಂದಿಟ್ಟು ಈ ಚುನಾವಣೆಯಲ್ಲಿ ಹೋರಾಟ ಮಾಡ್ತೇನೆ. ನಾನು ಚುನಾವಣೆ ಗೆ ಸ್ಪರ್ಧೆ ಮಾಡೊ‌ ಪ್ರಶ್ನೆ ಇಲ್ಲ. ತಾವು ಚುನಾವಣೆ ಗೆ ಸ್ಪರ್ಧೆ ಮಾಡಲ್ಲ ಎಂದು ಮತ್ತೊಮ್ಮೆ ದೇವೇಗೌಡರು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!