ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದ ತನಿಖೆ ಸಂಕಷ್ಟ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿಂದು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಾತಿಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನೂ ಅದನ್ನು ಪರಿಪೂರ್ಣವಾಗಿ ನೋಡಿಲ್ಲ. ಮುಂದಿನ ದಿನಗಳಲ್ಲಿ ಅದನ್ನು ಕ್ಯಾಬಿನೆಟ್ ಗೆ ಇಟ್ಟು ಜಾರಿಗೆ ತರುತ್ತೇನೆ. ಜಾತಿ ಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾ. ಹೀಗಾಗಿ ಜಾರಿ ಮಾಡೇ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.