ಹೊಸ ದಿಗಂತ ಡಿಜಿಟಲ್ ಡೆಸ್ಕ್;
ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಮಂತ್ರಿ ಸ್ಥಾನ ಬಿಡುತ್ತೇನೆ ಎಂದು ಸಹಕಾರ ಸಚಿವ ರಾಜಣ್ಣ ಹೊಸ ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದು ಸತ್ಯ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನವನ್ನು ಬಿಡುತ್ತೇನೆ. ನಾನು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ಸಿಎಂ ಸ್ಥಾನ ಬದಲಾವಣೆ ಆಗಬಹುದು ಆಗದೇ ಇರಬಹುದು ಎಂದು ಹೇಳಿದ್ದಾರೆ.