ನಾಲ್ಕೈದು ವರ್ಷ ಬದುಕಿರುತ್ತೇನೆ, ಅಲ್ಲಿಯವರೆಗೂ ಕರ್ನಾಟಕದ ನೀರಾವರಿಗಾಗಿ ಹೋರಾಟ: ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹದಾಯಿ ನದಿನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​​ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾ ಮಾಡೋಣ. ನಾನು ಇನ್ನು 4-5 ವರ್ಷ ಬದುಕಿರುತ್ತೇನೆ, ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದಾಯಿ ಯೋಜನೆ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ವಿವಾದ ಕೋರ್ಟ್​ನಲ್ಲಿರುವಾಗ ಪ್ರಧಾನಿ ಏನು ಮಾಡುತ್ತಾರೆ. ಹಾಗಾಗಿ ನಮ್ಮವರು ಕೋರ್ಟ್​ನಲ್ಲಿ ಪ್ರಬಲ ವಾದ ಮಾಡಬೇಕು. ನಾವೆಲ್ಲ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದು ಕರೆ ಕೊಟ್ಟರು.

25 ಟಿಎಂಸಿ ನೀರು ಕರ್ನಾಟಕಕ್ಕೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ. ಮಹದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತಿದೆ. ಎತ್ತಿನಹೊಳೆ ಯೋಜನೆಗೆ ₹8 ಸಾವಿರ ಕೋಟಿ ಮಂಜೂರು ಮಾಡಿದರೂ. ಈಗ 25 ಸಾವಿರ ಕೋಟಿ ನೀಡಿದ್ದಾರೆ, ಅದು ಎಲ್ಲಿವರೆಗೆ ಬಂದಿದೆ ಗೊತ್ತಿಲ್ಲ. ಎಲ್ಲಿಯವರೆಗೆ ಯೋಜನೆ ಆಗಿದೆ, ಅಲ್ಲಿಯವರೆಗೆ ನೋಡಿಕೊಂಡು ಬರೋಣ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!