spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನನಗೆ ಯಾವ ಖಾತೆ ಕೊಟ್ಟರೂ, ಅದನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ: ಸಚಿವ ಕೆ.ಎಸ್.ಈಶ್ವರಪ್ಪ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಉಪಮುಖ್ಯಮಂತ್ರಿ ಸ್ಥಾನ ತೆಗೆದು ಹಾಕಿದ್ದು ಹೈಕಮಾಂಡ್ ನಿರ್ಧಾರ. ನನಗೆ ಯಾವ ಖಾತೆ ಕೊಟ್ಟರೂ, ಅದನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಗುರುವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕು ಎಂದು ಬೆಂಬಲಿಗರು ಬಯಸಿದ್ದರು. ಇದರ ಮಧ್ಯೆ, ಸಚಿವನೂ ಆಗುವುದಿಲ್ಲ ಎಂದು ಕೆಲವರು ಬಿಂಬಿಸಿದ್ದರು. ಆದರೆ, ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಎಂದು ಎಲ್ಲರಿಗೂ ಗೊತ್ತಾಗಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಭವವುಳ್ಳವರು, ಒಳ್ಳೆಯ ಆಡಳಿತ ನಡೆಸುತ್ತಾರೆ. ಸಚಿವ ಸಂಪುಟದಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಈವರೆಗೆ ಬಿಜೆಪಿಗೆ ಯಾವತ್ತು ಸಂಪೂರ್ಣ ಬಹುಮತ ಬಂದಿಲ್ಲ. ಹೀಗಾಗಿ ಬಿಜೆಪಿ ಪೂರ್ಣಪ್ರಮಾಣದಲ್ಲಿ ಅಧಿಕಾರ ನಡೆಸಿಲ್ಲ. ಹೊರಗಿನವರ ಸಹಕಾರ ಪಡೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಇದರಿಂದಾಗಿಯೇ ಸಣ್ಣ ಪುಟ್ಟ ಗೊಂದಲಗಳಿದ್ದವು. ಮುಂದೆ ಈ ರೀತಿ ಆಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರುತ್ತದೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟçವಾದಿಯನ್ನು ಬಿಜೆಪಿ ಮುಖ್ಯಮಂತ್ರಿ ಮಾಡುತ್ತದೆ ಎಂದು ತಿಳಿಸಿದರು.

ಸುತ್ತೂರು ಶ್ರೀ ಆಶೀರ್ವಾದ ಪಡೆದ ಕೆ.ಎಸ್.ಈಶ್ವರಪ್ಪ:
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ನೂತನ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ, ಸುತ್ತೂರು ಮಠದ ಪೀಠಾಧಿಪತಿ ಶ್ರೀಶಿವರಾತ್ರಿದೇಶಿಕೇಂದ್ರ ಸ್ವಾಮಿ ಅವರ ಆಶೀರ್ವಾದ ಪಡೆದರು. ಕೆಲಕಾಲ ಮಾತನಾಡಿದ ಬಳಿಕ ಅಲ್ಲಿಂದ ತೆರಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss