ನಾನು ಯಾವತ್ತೂ ಜಾತಿ ರಾಜಕಾರಣ ಮಾಡುವವನಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿ ನೆಹರು ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವತ್ತೂ ರಾಜಕಾರಣ ಜಾತಿ ಮಾಡುವವನಲ್ಲ. ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ ಎಂದು ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಹೇಳಿದ್ದರು. ಅದರಂತೆ ಈ ಸಮಾವೇಶ ನಡೆಯುತ್ತಿದೆ ಎಂದರು.

ನಾನು ಈ ಜಾತಿ ವ್ಯವಸ್ಥೆಗೆ ಯಾವತ್ತಿದ್ದರೂ ವಿರುದ್ಧ. ಆದರೆ ಅಶಕ್ತ ಜನ ಸಮುದಾಯಗಳು ತಮ್ಮ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವುದು ತಪ್ಪಲ್ಲ ಎಂದು ನಂಬಿದ್ದೇನೆ ಎಂದರು.
ಅಶಕ್ತ ಸಮುದಾಯಗಳು ಸಂಘಟಿತರಾಗದೇ ಇರುವುದರಿಂದ ಮತ್ತು ತಮ್ಮಲ್ಲಿ ನಾಯಕತ್ವ ಬೆಳೆಸಿಕೊಳ್ಳದೇ ಇರುವುದರಿಂದ ಅವರ ಪಾಲಿನ ಹಕ್ಕುಗಳು ಮತ್ತು ರಾಜಕೀಯ ಅಧಿಕಾರದಿಂದ ವಂಚಿತವಾಗಿವೆ ಎಂದು ವಿವರಿಸಿದರು.

ಪ್ರತಿ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆದರೆ ಮಾತ್ರ ಸಮಸಮಾಜದ ನಿರ್ಮಾಣ ಸಾಧ್ಯ. ಎಲ್ಲರಿಗೂ ಅವರವರ ಪಾಲಿನ ಅಧಿಕಾರ , ಅವಕಾಶ ಸಿಗಬೇಕು. ಈ ಸಾಮಾನ್ಯ ಜ್ಞಾನ ನಮ್ಮನ್ನು ಟೀಕಿಸುವವರಿಗೆ ಇಲ್ಲವಾಗಿದೆ ಎಂದರು.

ನಮ್ಮದು ಹೇಳಿ ಕೇಳಿ ಜಾತಿ ಮತ್ತು ತಾರತಮ್ಯದಿಂದ ಕೂಡಿರುವ ಸಮಾಜ. ಹೀಗಾಗಿ ಅವಕಾಶಗಳ ಹಂಚಿಕೆಯಲ್ಲೂ ತಾರತಮ್ಯ ಇರುತ್ತದೆ. ಇವನ್ನೆಲ್ಲಾ ಸರಿದೂಗಿಸಬೇಕಾದರೆ ಸಂಘಟನೆ, ಸಮಾವೇಶಗಳು ಅಗತ್ಯ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!