ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ವಿಮಾನ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಇಡೀ ವಿಶ್ವವೇ ಕಂಬನಿ ಮಿಡಿಯುತ್ತಿದ್ದು, ವಿಶ್ವ ಕ್ರಿಕೆಟ್ ಕೂಡ ಮೌನಾಚರಣೆಯೊಂದಿಗೆ ಗೌರವ ಸಲ್ಲಿಸಿದೆ.
ಇದೆಲ್ಲದರ ನಡುವೆ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ವಾರ್ನರ್, ಈ ವಿಮಾನ ದುರಂತದಿಂದ ಆಘಾತಕ್ಕೊಳಗಾಗಿದ್ದು, ಇನ್ನು ಮುಂದೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ಮಾಡೋದಿಲ್ಲ ಎಂದು ನಿರ್ಧಾರಿಸಿದ್ದಾರೆ.
ಡೇವಿಡ್ ವಾರ್ನರ್ ಸ್ವತಃ ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಹಲವು ವಿಚಾರಗಳ ಬಗ್ಗೆ ಬರೆದುಕೊಂಡಿದ್ದಾರೆ. ಮೊದಲನೆಯದಾಗಿ, ಅವರು ಇಡೀ ಘಟನೆಯನ್ನು ದುಃಖಕರ ಎಂದು ಕರೆದಿದ್ದಾರೆ. ಮುಂದುವರೆದು, ನಾನು ನನ್ನ ಇಡೀ ಕುಟುಂಬದೊಂದಿಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಲು ಉದ್ದೇಶಿಸಿದ್ದೆ, ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ನಾನು ಮತ್ತೆ ಎಂದಿಗೂ ಏರ್ ಇಂಡಿಯಾದಲ್ಲಿ ಪ್ರಯಾಣಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.