ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಮುಂದಿನ‌ ಐದು ವರ್ಷ ನಿಖಿಲ್​​ ಕುಮಾರಸ್ವಾಮಿಯನ್ನು ಕರೆತರುವ ಪ್ರಶ್ನೆಯೇ ಇಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ (H.D.Kumaraswamy) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ನಿಖಿಲ್ ಈ ಹೇಳಿಕೆಯನ್ನು ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಕುಮಾರಸ್ವಾಮಿ ಜೊತೆ ನಿಖಿಲ್ ಕೂಡ ದೆಹಲಿಗೆ ತೆರಳಿದ್ದಾರೆ. ಅದರಂತೆ ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟನೆ ನೀಡಿದರು.

ಮುಂದಿನ‌ ಐದು ವರ್ಷ ನಿಖಿಲ್​​ ಕುಮಾರಸ್ವಾಮಿಯನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದಾಗಿ ಈ ಹಿಂದೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!