ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನ ಬಿಟ್ಟುಕೊಡಲ್ಲ: ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G.Parameshwar) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎರಡೂವರೆ ವರ್ಷ ಆದ ಮೇಲೆ ಹಿರಿಯ ಸಚಿವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ಸಚಿವ ಮುನಿಯಪ್ಪ (K.H Muniyappa) ಹೇಳಿಕೆಗೆ ತಿಕ್ರಿಯೆ ನೀಡಿದ ಅವರು ಪ್ರ, ಮುನಿಯಪ್ಪ ಅವರ ಹೇಳಿಕೆಗೆ ನನ್ನ ಸಹಮತ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಯಾಕೆ ಎರಡೂವರೆ ವರ್ಷ ಆದ ಮೇಲೆ ಸಚಿವ ಸ್ಥಾನ ತ್ಯಾಗ ಮಾಡಲಿ? ಅವರ ವೈಯಕ್ತಿಕ ಅಭಿಪ್ರಾಯದಲ್ಲಿ ತ್ಯಾಗದ ಬಗ್ಗೆ ಹೇಳಿರಬಹುದು. ಆ ವಿಚಾರದಲ್ಲಿ ತಪ್ಪೇನು ಇಲ್ಲ. ಅವರು ಹೇಳಿದರೆ, ಅವರು ಸ್ಥಾನ ಬಿಟ್ಟು ಕೊಡುತ್ತಾರೆ. ನಾನು ಯಾಕೆ ಸಚಿವ ಸ್ಥಾನ ಬಿಟ್ಟು ಕೊಡಲಿ. ನಾನು ಸ್ಥಾನ ಬಿಟ್ಟು ಕೊಡುವ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.

ಸಿಎಂ ಆಗೋ ಅವಕಾಶ ಬಂದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು, ಅದು ಅವಕಾಶ ಬಂದ ಮೇಲೆ ನೋಡೊಣ ಎಂದು ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!