ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದ ತನಿಖೆಯಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನನ್ನ ವಿರುದ್ಧ ಇಡಿ ಗೂ ದೂರು ನೀಡಲಾಗಿದೆ. ಈ ರೀತಿ ದೂರು ಯಾರು ಬೇಕಾದರೂ ನೀಡಬಹುದು. ಆದರೆ ಕಾನೂನು ಏನು ಹೇಳುತ್ತದೆ ಹಾಗೆ ನಡೆದುಕೊಳ್ಳಬೇಕಾಗುತ್ತದೆ. ನನ್ನ ವಿಚಾರದಲ್ಲೂ ಕಾನೂನು ರೀತಿ ಕ್ರಮ ಆಗುತ್ತದೆ ಎಂದರು.
ಕುಮಾರಸ್ವಾಮಿ ಅವರು ಲೋಕಾಯುಕ್ತ ಎಡಿಜಿಪಿ ಮೇಲೆ ಟೀಕೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.