ನಾಳೆಯಿಂದ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಅಥವಾ ನಾಯಕರೊಂದಿಗೆ ಯಾವುದೇ ಸಭೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಹೇಳಿದ್ದಾರೆ.

ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ, ಸಂಪುಟ ಪುನಾರಚನೆ ಹಾಗೂ ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನ ವಿಚಾರವಾಗಿ ಗೊಂದಲ ತೀವ್ರಗೊಂಡಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಜುಲೈ 25 ರಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!