April 23, 2026
Thursday, April 23, 2026
spot_img

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ: ಜಮೀರ್ ಜೆಡಿಎಸ್ ಸೇರ್ಪಡೆ ಕುರಿತು ಕುಮಾರಸ್ವಾಮಿ ರಿಯಾಕ್ಷನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕೀಯದಲ್ಲಿ ಕಳೆದ ಹಲವು ದಿನಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು, ಇದೀಗ ಮತ್ತೊಮ್ಮೆ ಉತ್ತರಿಸಿದ್ದು, ಅಧಿಕಾರಕ್ಕಾಗಿ ಅಂತಹವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಅನಿವಾರ್ಯ ನಮಗೆ ಬಂದಿಲ್ಲ ಎಂದು ತಿಳಿಸಿದ್ದಾರೆ .

ಹಾಸನದಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ. ಅದರಲ್ಲೂ ಅಂತಹವರನ್ನು ಸೇರಿಸಿಕೊಳ್ಳುವ ಅವಶ್ಯಕತೆಯು ನಮಗೆ ಇಲ್ಲ. ಹೀಗಾಗಿ ಮತ್ತೆ ಈ ಕುರಿತು ಕೇಳಬೇಡಿ ಎಂದು ತಿಳಿಸಿದರು.

ದಾವಣಗೆರೆ ಉಪ ಚುನಾವಣೆ ಸಂದರ್ಭ ಟಿಕೆಟ್ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ವೈಮನಸು ಮೂಡಿದ್ದು, ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಸಚಿವ ಜಮಿರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದರು. ಹೀಗಾಗಿ ಜಮಿರ್ ಅಹ್ಮದ್ ಖಾನ್ ಕಾಂಗ್ರೆಸ್ ತೊರೆದು ವಾಪಸ್ ಜೆಡಿಎಸ್​​ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !