ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,
ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಸದನದಲ್ಲೂ ಪ್ರಸ್ತಾಪಿಸಲಿ, ಬೇರೆ ಎಲ್ಲಾದರೂ ಪ್ರಸ್ತಾಪಿಸಲಿ. ಯಾರು ಬೇಡ ಎನ್ನುತ್ತಾರೆ. ದೇಶದೆಲ್ಲೆಡೆ ಚರ್ಚೆ ಮಾಡಲಿ. ನನ್ನ ದಾಖಲೆ ಅವರಿಗೆ ತೋರಿಸುವ ಅಗತ್ಯವಿಲ್ಲವಾದರೂ ನಾನು ಆ ವಾಚ್ ಕದ್ದಿದ್ದೇನೆ ಎಂದು ಹೇಳಿದ್ದಾರಲ್ಲ ಅದಕ್ಕೆ ತೋರಿಸಿರುವೆ ಎಂದು ತಿರುಗೇಟು ನೀಡಿದರು.

