ಮೋದಿ ಇಡೀ ದೇಶದಲ್ಲಿ ಮದ್ಯ ನಿಷೇಧ ಮಾಡಿದರೆ ಸಾವಿರ ಸಲಾಂ ಹೊಡೆಯುತ್ತೇನೆ: B R ಪಾಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯುವ ಸಮುದಾಯಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯ ಪ್ರವೃತ್ತಿ ಮತ್ತು ಸಮಾಜದ ಮೇಲೆ, ವಿಶೇಷವಾಗಿ ಬಡವರ ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಜ್ಯ ಯೋಜನಾ ಆಯೋಗದ ಅಧ್ಯಕ್ಷ ಬಿ.ಆರ್. ಪಾಟೀಲ್, ದೇಶಾದ್ಯಂತ ಮದ್ಯ ನಿಷೇಧವನ್ನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಗುರುವಾರ ಸಕಲೇಶಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪಾಟೀಲ್, “ಪ್ರಧಾನ ಮಂತ್ರಿಗಳು ದೇಶಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಇಂತಹ ಕ್ರಮದಿಂದ ಸಾಮಾನ್ಯ ಜನರು ಹಾಗೂ ಸಮಾಜದ ಹಿತದೃಷ್ಟಿಯಿಂದ ಉತ್ತಮವಾಗಿರುತ್ತದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯ ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಮದ್ಯ ನಿಷೇಧ ನೀತಿಯು ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮದ್ಯ ಮಾರಾಟವು ರಾಜ್ಯದ ಆದಾಯಕ್ಕೆ ಗಣನೀಯ ಕೊಡುಗೆ ನೀಡುತ್ತಿದ್ದರೂ, ಗ್ರಾಮೀಣ ಪ್ರದೇಶದ ಸಣ್ಣ ಅಂಗಡಿಗಳಲ್ಲಿಯೂ ಸಹ ಮದ್ಯ ಸುಲಭವಾಗಿ ಲಭ್ಯವಿದೆ. ಇದು ಬಡತನಕ್ಕೆ ಪ್ರಾಥಮಿಕ ಕಾರಣವಾಗಿದೆ ಎಂದು ಬಿ.ಆರ್ ಪಾಟೀಲ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!