ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಆ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ತಿಳಿಸಿದರು.
ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಕರೆ ನೀಡಿದರು.
ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಆದರೆ ಅದು ಸಾಧ್ಯವಿಲ್ಲ. ಏಕೆಂದರೆ, ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ದೇವೇಗೌಡರು ಖಡಕ್ ಸಂದೇಶ ರವಾನಿಸಿದರು.