ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ಅವರು ಇಂದು (ಜೂನ್ 4) ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಸಂಪುಟದಲ್ಲಿ ಮಾಜಿ ಪ್ರಧಾನಿ ಹಾಗೂ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.
ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸ್ವತಃ ಮಾತನಾಡಿದ್ದಾರೆ. ನಮ್ಮ ಗೆಲುವಿಗೆ ಕರ್ನಾಟಕದ ಜನತೆ ಕಾರಣ. ನರೇಂದ್ರ ಮೋದಿಯವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಮೋದಿಯವರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ. ಸಚಿವ ಸ್ಥಾನ ಸಿಕ್ಕರೆ ಜನರ ಪರ ಕೆಲಸ ಮಾಡುತ್ತೇನೆ. ಕೃಷಿ ಖಾತೆ ಸಿಕ್ಕರೆ ಸಂತೋಷ, ರೈತರಿಗಾಗಿ ಕೆಲಸಮಾಡುವ ಅವಕಾಶ ಸಿಗುತ್ತೆ.
ರಾಜ್ಯದಲ್ಲಿ ಜೆಡಿಎಸ್ ಪುನಶ್ಚೇತನಕ್ಕೆ ಸಾಕ್ಷಿಯಾಗಿದೆ. ಮೋದಿ ನೇತೃತ್ವದ ಸರ್ಕಾರ ಕನ್ನಡಿಗರಿಂದ ಪುನಶ್ಚೇತನಗೊಂಡಿದೆ. ನನ್ನ ಕ್ಷೇತ್ರವಾದ ಮಂಡ್ಯದ ಜನತೆಗೆ ನಾನು ವಿಶೇಷವಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.