ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನರ ಆರ್ಶೀವಾದದಿಂದ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಸಚಿವನಾಗಿದ್ದೇನೆ. ಮಂಡ್ಯ ಜನರು ನನಗೆ ಆರ್ಶೀವಾದ ಮಾಡಿದ್ದೀರಿ. ಎಷ್ಟೇ ಕೆಲಸದ ಒತ್ತಡ ಇದ್ದರೂ ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಿದ್ದೇನೆ, ಜನರ ಆಸೆಯನ್ನು ಈಡೇರಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜನರು ನನ್ನ ಮೇಲೆ ಭರವಸೆ ಇಟ್ಟು ಗೆಲ್ಲಿಸಿದ್ದಾರೆ. ನಾನು ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಯುವ ಜನರಿಗೆ ಕೆಲಸ ರೂಪಿಸಲು ಇಂದು ಸಹ ಸಭೆ ಮಾಡಿದ್ದೇನೆ. ಆ ನಿಟ್ಟಿನಲ್ಲಿ ನನ್ನ ಇಲಾಖೆಯ ಮೂಲಕ ಸುದೀರ್ಘ ಕೆಲಸ ಮಾಡುತ್ತಿದ್ದೇನೆ ಎಂದರು.