ಸ್ಟಾಲಿನ್ ಮನೆಗೆ ಹೋಗುವರೆಗೂ ನಾನು ಚಪ್ಪಲಿ ಧರಿಸಲ್ಲ: ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಶಪಥ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವ ವರೆಗೂ ಶೂ ಧರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದಾರೆ.

ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದ ನಡೆ ವಿರೋಧಿಸಿ ಶುಕ್ರವಾರ ನಮ್ಮ ಮನೆಯ ಮುಂದೆಯೇ ಆರು ಬಾರಿ ಚಾಟಿಯೇಟು ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ. ಅದಕ್ಕಾಗಿಯೇ ಈಗ ಬಿಜೆಪಿ ಸದಸ್ಯರು ತಮ್ಮ ಮನೆಗಳ ಹೊರಗೆ ಪ್ರತಿಭಟನೆ ನಡೆಸುತ್ತಾರೆ ಎಂದು ಅವರು ಹೇಳಿದ್ದಾರೆ.

ಕೊಯಮತ್ತೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾನು ಕೂಡ 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕೇಸ್ ಹಾಕುತ್ತಿದ್ದೇನೆ. ಇಲ್ಲಿ ಅಪರಾಧಿಗಳಿಗೆ ಡಿಎಂಕೆಯ ಕವಚವಿದ್ದು, ಎಫ್ಐಆರ್ ಸಹ ಲೀಕ್​ ಆಗಿದೆ. ಪೊಲೀಸ್ ಇಲಾಖೆ ಹೊರತು ಪಡಿಸಿ ಲೀಕ್​ ಆಗಲು ಸಾಧ್ಯವಿಲ್ಲ ಎಂದರು.

ತಮಿಳುನಾಡಿನ ಬಿಜೆಪಿ ಘಟಕದ ಪರವಾಗಿ ಅಣ್ಣಾಮಲೈ ಅವರು ಇಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದು ಸಂತ್ರಸ್ತೆಯ ಗುರುತನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಈ ಅಸಹ್ಯಕರ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯ ಪೊಲೀಸ್ ಇಲಾಖೆಗೆ ಸೂಚನೆ ನೀಡಬೇಕು ಎಂದಿದ್ದಾರೆ. ಹಾಗೂ ಉದ್ದೇಶಪೂರ್ವಕ ನಿರ್ಲಕ್ಷ್ಯ ಮತ್ತು ಫ್ಲಾಗ್‌ಸಿಂಗ್ ಅಂತತಹ ಘೋರ ಅಪರಾಧಗಳ ವಿರುದ್ಧ ರಾಜ್ಯದ ಮಹಿಳೆಯರನ್ನು ರಕ್ಷಿಸುವಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ವಿರುದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಡಿಎಂಕೆ ವಿದ್ಯಾರ್ಥಿ ಘಟಕದ ಕಾರ್ಯದರ್ಶ ಜ್ಞಾನಶೇಖರನ್ ಅವರನ್ನು ಬಂಧಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಹಿಳೆಯರಿಗೆ ಭದ್ರತೆ ಇಲ್ಲ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಇಂದು ಬಿಜೆಪಿ ಮತ್ತು ಎಐಎಡಿಎಂಕೆ ಪ್ರತ್ಯೇಕ ಪ್ರತಿಭಟನೆ ನಡೆಸಿವೆ. ಇನ್ನು ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ರಾಜ್ಯಪಾಲ ಹಾಗೂ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ತಮಿಳಿಸೈ ಭಾಗವಹಿಸಿದ್ದರು. ಈ ಪ್ರತಿಭಟನೆ ವೇಳೆ ಪೊಲೀಸರು ತಮಿಳಿಸೈ ಸೇರಿದಂತೆ ಬಿಜೆಪಿ ಸದಸ್ಯರನ್ನು ಬಂಧಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!