ನಾನೊಬ್ಬ ರಾಷ್ಟ್ರೀಯ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ: ಕೆ.ಅಣ್ಣಾಮಲೈ

ಹೊಸದಿಗಂತ ವರದಿ,ಮಂಗಳೂರು:

ನಾನೊಬ್ಬ ರಾಷ್ಟ್ರೀಯ ಪಕ್ಷದ ಕಾರ್ಯಕರ್ತ, ಪಕ್ಷ ನನಗೆ ಒಂದು ಜವಾಬ್ದಾರಿ ಕೊಟ್ಟಿತ್ತು. ಇನ್ನೊಂದು ಜವಾಬ್ದಾರಿ ಕೊಟ್ಟರು, ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಕೆಲಸ ಮಾಡುವುದು ಮಾತ್ರ ನನ್ನ ಕರ್ಮ, ಏನೇ ಅವಕಾಶಕೊಟ್ಟರು ಕೆಲಸ ಮಾಡುತ್ತೇನೆ ಎಂದು ತಮಿಳುನಾಡು ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ತಿಳಿಸಿದ್ದಾರೆ.

ಬುಧವಾರ ಉಡುಪಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಚುನಾವಣೆ ಬರುತ್ತಿದ್ದು, ಗೃಹ ಮಂತ್ರಿಯವರನ್ನು ತಮಿಳುನಾಡು ವಿಪಕ್ಷ ನಾಯಕ ಪಳನಿಸ್ವಾಮಿ ಭೇಟಿಯಾಗಿದ್ದಾರೆ. ಗೃಹ ಸಚಿವರು ಮೈತ್ರಿಯ ಬಗ್ಗೆ ಮಾತನಾಡಿದ್ದಾರೆ, ಎಐಡಿಎಂಕೆ ಕುರಿತ ನನ್ನ ನಿಲುವು ಎಲ್ಲರಿಗೂ ಗೊತ್ತು. ಡಿಎಂಕೆಯನ್ನು ಅಧಿಕಾರದಿಂದ ಇಳಿಸುವುದು ಎಲ್ಲರ ಉದ್ದೇಶವಾಗಿದೆ ಎಂದರು.

ಎಐಡಿಎಂಕೆ ಬಿಜೆಪಿ ಜೊತೆ ಮೈತ್ರಿ ಬಯಸುತ್ತಿದ್ದು, ಗೃಹ ಸಚಿವರು ಮೈತ್ರಿಯ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ನಾನು ಎಲ್ಲಿ ಇರಬೇಕು, ಯಾವ ಪೊಸಿಷನ್ನಲ್ಲಿ ಇರಬೇಕು ಎಂದು ಪಕ್ಷಕ್ಕೆ ಗೊತ್ತಿದೆ. ಮೈತ್ರಿಗೆ ಯಾವುದು ಸರಿಯಾದ ನಿಲುವು ಎಂದು ಪಕ್ಷಕ್ಕೆ ಗೊತ್ತಿದ್ದು, ಏನೇ ತೀರ್ಮಾನ ತೆಗೆದುಕೊಂಡರು ನಾನೊಬ್ಬ ಕಾರ್ಯಕರ್ತ ಎಂದರು.

ತಮಿಳುನಾಡಿನಲ್ಲಿ ರಾಜಕೀಯವಾಗಿ ಬದಲಾವಣೆ ಆಗಲಿದ್ದು, ಪಕ್ಷಕ್ಕೆ ಇನ್ನೊಂದು ಅವಕಾಶ ಸಿಗಬಹುದು. ಮಹಾರಾಷ್ಟ್ರ, ಒರಿಸ್ಸಾದಲ್ಲಿ ಪ್ರಾಮಾಣಿಕ ಪ್ರಯತ್ನದಿಂದ ಏನಾಗಿದೆ ಎಂದು ಗೊತ್ತು. ತಮಿಳುನಾಡು ಒಂದು ಸುದೀರ್ಘ ಕಾಲದ ಆಟ, ಬಹಳ ವರ್ಷದಿಂದ ನಾವು ತಾಳ್ಮೆಯಿಂದ ಕಾದಿದ್ದೇವೆ, ಕಾಯುತ್ತೇವೆ. ಇನ್ನು 20 ವರ್ಷ 30 ವರ್ಷ ಬೇಕಾದರೂ ಆಗಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ನಿರ್ಧಾರಕ್ಕೆ ಕಾರ್ಯಕರ್ತರಾಗಿ ಒಪ್ಪಿಗೆ ಕೊಡಬೇಕು, ಪಕ್ಷ ರಾಷ್ಟ್ರೀಯ ಮಟ್ಟದಿಂದ ಆಲೋಚನೆ ಮಾಡುತ್ತದೆ. ಡಿಎಂಕೆ ಎಷ್ಟು ಗಲೀಜು ಸರಕಾರ ನಡೆಸುತ್ತಿದ್ದೇ ನೋಡಿದ್ದೀರಿ. 13 ಸಚಿವರ ಮೇಲೆ ಭ್ರಷ್ಟಾಚಾರ ಪ್ರಕರಣ ನ್ಯಾಯಾಲಯದಲ್ಲಿದ್ದು, ಒಬ್ಬ ಮಂತ್ರಿ ಒಂದೂವರೆ ವರ್ಷ ಜೈಲಿನಲ್ಲಿದ್ದು ಮತ್ತೆ ಮಂತ್ರಿಯಾಗಿದ್ದಾರೆ ಎಂದು ಕಿಡಿಕಾರಿದರು.

ತಮಿಳುನಾಡು ರಾಜಕೀಯದಲ್ಲಿ ದೀರ್ಘಕಾಲಿನ ದೃಷ್ಟಿಕೋನದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ, ರಾಜಕೀಯದಲ್ಲಿ ಅಧಿಕಾರಕ್ಕಿಂತ ತಾಳ್ಮೆ ಮುಖ್ಯ. ತಾಳ್ಮೆಯಿಂದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಒಂದಲ್ಲ ಒಂದು ದಿನ ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದರು.

ಬಿಜೆಪಿಯಲ್ಲಿ ರಾಜೀನಾಮೆ ಎಂಬುದು ಇಲ್ಲ. ಮುಂದಿನ ರಾಜ್ಯ ಅಧ್ಯಕ್ಷ ಚುನಾವಣೆ ಆಗುವಾಗ ನಾನು ಸ್ಪರ್ಧೆಯಲ್ಲಿ ಇರಲ್ಲ, ಯಾವಾಗ ಬೇಕಿದ್ದರೂ ರಾಜ್ಯಾಧ್ಯಕ್ಷ ಚುನಾವಣೆ ಆಗಬಹುದು ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!