ನಾನು ಈಗ ನನಗಾಗಿ ಏನನ್ನಾದರೂ ಕೇಳುವುದಕ್ಕಿಂತ ಸಾಯುವುದೇ ಮೇಲು: ಶಿವರಾಜ್‌ ಸಿಂಗ್‌ ಚೌಹಾಣ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:  

ಬಿಜೆಪಿ (BJP) ಹೈಕಮಾಂಡ್ ನಿರ್ಧಾರದಿಂದ ನನಗೆ ತೃಪ್ತಿಯಿದೆ. ತನಗಾಗಿ ಏನನ್ನಾದರೂ ಕೇಳುವುದಕ್ಕಿಂತ ಸಾಯುವುದೇ ಲೇಸು, ಅದಕ್ಕಾಗಿ ನಾನು ದೆಹಲಿಗೆ ಹೋಗುವುದಿಲ್ಲ. ಎಂದು ಮಧ್ಯಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivaraj Singh Chouhan) ಹೇಳಿದ್ದಾರೆ.

ಇಂದು ತಮ್ಮ ವಿದಾಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಮೋಹನ್‌ ಯಾದವ್ ಅವರನ್ನು ಸಿಎಂ ಆಯ್ಕೆ ಮಾಡಿರುವ ಬಿಜೆಪಿಯ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಹೇಳಿದರು.

ಮೋಹನ್ ಯಾದವ್ (Mohan Yadav) ನೇತೃತ್ವದಲ್ಲಿ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸುತ್ತದೆ ಎಂಬ ವಿಶ್ವಾಸ ನನಗಿದೆ. ಈ ಮೂಲಕ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಮಧ್ಯಪ್ರದೇಶವು ಹೊಸ ಛಾಪು ಮೂಡಿಸುತ್ತದೆ. ಇದಕ್ಕಾಗಿ ನಾನು ಅವರನ್ನು ಬೆಂಬಲಿಸುತ್ತೇನೆ ಎಂದರು.

2005 ರಲ್ಲಿ ನಾನು ಮುಖ್ಯಮಂತ್ರಿಯಾದೆ. ಉಮಾಭಾರತಿ ಅವರ ಕಠಿಣ ಪರಿಶ್ರಮದಿಂದ ಅಂದು ಸರ್ಕಾರ ರಚನೆಯಾಗಿತ್ತು. ನಾನು ಈಗ ನನಗಾಗಿ ಏನನ್ನಾದರೂ ಕೇಳುವುದಕ್ಕಿಂತ ಸಾಯುವುದೇ ಮೇಲು. ಇವತ್ತು ನಾನು ಇಲ್ಲಿಂದ ವಿದಾಯ ಹೇಳುತ್ತಿದ್ದೇನೆ. ನನ್ನ ಹೃದಯ ಸಂತೋಷ ಮತ್ತು ತೃಪ್ತಿಯಿಂದ ತುಂಬಿದೆ ಎಂದು ಹೇಳಿದರು.

ಸಾರ್ವಜನಿಕರೊಂದಿಗಿನ ನನ್ನ ಸಂಬಂಧವು ಯಾವಾಗಲೂ ಚೆನ್ನಾಗಿ ಇರುತ್ತದೆ. ನಾನು ಈ ಬಾಂಧವ್ಯವನ್ನು ಕಟ್‌ ಮಾಡಲ್ಲ, ನನ್ನ ಉಸಿರಿರುವವರೆಗೂ ನನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡಲು ನಾನು ಶ್ರಮಿಸುತ್ತೇನೆ ಎಂದು ಅವರು ಹೇಳಿದರು.

ಚೌಹಾಣ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2005 ರಿಂದ 2018 ರವರೆಗೆ ಮತ್ತು ಮತ್ತೆ 2020 ರಿಂದ 2023 ರವರೆಗೆ ಅವರ ಅಧಿಕಾರಾವಧಿಯು ರಾಜ್ಯದ ಪಥದಲ್ಲಿ ನಿರಾಕರಿಸಲಾಗದ ಛಾಪು ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!