ಗುಜರಾತ್‌ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗುಜರಾತ್​ನ ಜಾಮ್‌ನಗರದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ನನ್ನು ರಕ್ಷಿಸಲಾಗಿದೆ.

ಜಾಮ್‌ನಗರ ಎಸ್‌ಪಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು ಎಂದು ಜಾಮ್‌ನಗರ ಎಸ್‌ಪಿ ಪ್ರೇಮ್‌ಸುಖ್ ದೇಲು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ, ಒಬ್ಬ ಪೈಲಟ್ ವಿಮಾನದಿಂದ ಜಿಗಿದಿದ್ದು, ಮತ್ತೊಬ್ಬ ಪೈಲಟ್ ಸಾವನ್ನಪ್ಪಿದ್ದಾರೆ.

ಗಾಯಗೊಂಡ ಪೈಲಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿದೆ. ಜಾಮ್‌ನಗರ ನಗರದಿಂದ 12 ಕಿ.ಮೀ ದೂರದಲ್ಲಿರುವ ಸುವರ್ದಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವೀಡಿಯೊ ಕೂಡ ಹೊರಬಂದಿದ್ದು, ಅದನ್ನು ನೋಡಿದರೆ ಹೊಲದಲ್ಲಿ ಬೆಂಕಿ ಹೊತ್ತಿಕೊಂಡಿರುವಂತೆ ತೋರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!