May 10, 2026
Sunday, May 10, 2026
spot_img

VIRAL | ಮೂರು ವರ್ಷದ ಪುಟಾಣಿ ಮಗಳನ್ನು ಅಂಗನವಾಡಿಗೆ ಸೇರಿಸಿದ ಐಎಎಸ್‌ ಅಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ಕಾರಿ ಅಧಿಕಾರಿಗಳೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸೋದಿಲ್ಲ. ಹೈಫೈ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಾರೆ. ಆದರೆ ಇಲ್ಲೊಬ್ಬ ಐಎಎಸ್‌ ಅಧಿಕಾರಿ ತಮ್ಮ ಮೂರು ವರ್ಷದ ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿದ್ದಾರೆ.

ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಪುಲ್ಕಿತ್ ಗರ್ಗ್ ಅವರು ತಮ್ಮ ಮಗಳು ಶಿಯಾನನ್ನು ಅಂಗನವಾಡಿಗೆ ಸೇರಿಸುವ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ.

ಇದನ್ನೂ ಓದಿ: Viral | ಅಜ್ಜಿಗೆ ವಿಡಿಯೋ ಗೇಮ್ ಆಡೋದು ಕಲಿಸಿದ ಮೊಮ್ಮಗಳು! ಅಜ್ಜಿ-ಪುಳ್ಳಿ ಪೋಸ್ಟ್ ವೈರಲ್

ಭಾರತದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಶಕ್ತಿಶಾಲಿ ನಾಗರಿಕ ಸೇವೆಯಲ್ಲಿರುವ ಪುಲ್ಕಿತ್ ಗರ್ಗ್ ಅವರಿಗೆ ತನ್ನ ಮಗಳನ್ನು ದುಬಾರಿ ಖಾಸಗಿ ಶಾಲೆಗಳಲ್ಲಿ ಓದಿಸುವುದು ಕಷ್ಟವೇನಲ್ಲ, ಆದರೂ ಕೂಡ ತನ್ನ ಸ್ಥಳೀಯ ಅಂಗನವಾಡಿಗೆ ಕೇಂದ್ರಕ್ಕೆ ಸೇರಿಸಿದ್ದಾರೆ. ಈ ನಿರ್ಧಾರವು ಅವರು ಸರಕಾರಿ ವ್ಯವಸ್ಥೆಯ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ ಎಂದು ಅಂಗನವಾಡಿ ಕಾರ್ಯಕರ್ತೆಯೊಬ್ಬರು ಹೇಳಿದ್ದಾರೆ.

ಇದೇ ರೀತಿ ನಮ್ಮ ರಾಜ್ಯದಲ್ಲೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿಯೇ ಓದಬೇಕು ಎನ್ನುವ ರೂಲ್ಸ್‌ ಜಾರಿಯಾಗಬೇಕು, ಆಗ ಸರ್ಕಾರಿ ಶಾಲೆಗಳ ಸ್ಥಿತಿ ಉನ್ನತವಾಗಿರುತ್ತದೆ ಎನ್ನುವುದು ಜನರ ಅಭಿಪ್ರಾಯವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !