Friday, July 1, 2022

Latest Posts

ಅಕ್ರಮ ಆಸ್ತಿ ಸಂಪಾದನೆ, ಐಎಎಸ್‌ ಅಧಿಕಾರಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಕ್ರಮ ಆಸ್ತಿ ಸಂಪಾದನೆ ಆರೊಪದ ಮೇಲೆ ಉತ್ತರಾಖಂಡದ ಭಾರತೀಯ ಆಡಳಿತ ಸೇವೆ (ಐಎಎಸ್)‌ ಅಧಿಕಾರಿ ರಾಮ್ ವಿಲಾಸ್ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಘೋಷಿತ ಆದಾಯ ಮೂಲಕ್ಕಿಂತಲೂ ಹೆಚ್ಚಿನ ಆಸ್ತಿ ಸಂಪಾದನೆ ಹಿನ್ನೆಯಲ್ಲಿ ಐಎಎಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ದಿನವಿಡೀ ನಡೆಸಿದ ತನಿಖೆಯ ನಂತರ ನಿನ್ನೆ ರಾತ್ರಿ ಅವರನ್ನು ಬಂಧಿಸಲಾಗಿದೆ.

“ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಸೂಚನೆಯ ನಂತರ, ಐಎಎಸ್ ರಾಮ್ ವಿಲಾಸ್ ಯಾದವ್ ಅವರ ಆದಾಯಕ್ಕೆ ಮೀರಿದ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಒಂದು ದಿನದ ವಿಚಾರಣೆಯ ನಂತರ ಅವರನ್ನು ಬಂಧಿಸಲಾಗಿದೆ” ಎಂದು ರಾಜ್ಯ ವಿಜಿಲೆನ್ಸ್ ನಿರ್ದೇಶಕ ಅಮಿತ್ ಸಿನ್ಹಾ ತಿಳಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಜೂನ್ನಲ್ಲಿ ಕಣ್ಗಾಗವಲು (ವಿಜಿಲೆನ್ಸ್)‌ ಅಧಿಕಾರಿಗಳು ಐಎಎಸ್ ಅಧಿಕಾರಿ ರಾಮ್ ವಿಲಾಸ್ ಯಾದವ್‌ಗೆ ಸಂಬಂಧಿಸಿದ ನಾಲ್ಕು ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಲಕ್ನೋ ಮತ್ತು ಡೆಹ್ರಾಡೂನ್‌ನಲ್ಲಿ ಅವರ ಅಕ್ರಮ ಆಸ್ತಿ, ನಿವೇಶನಗಳು ಪತ್ತೆಯಾಗಿದ್ದವು. ಈ ಹಿನ್ನೆಯಲ್ಲಿ ಪ್ರಸ್ತುತ ಉತ್ತರಾಖಂಡದ ಗ್ರಾಮೀಣ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿರುವ ರಾಮ್‌ ವಿಲಾಸ್‌ ಅವರನ್ನು ಬಂಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss