ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪತಿ ವಿರುದ್ದ ಭೂ ಕಬಳಿಕೆ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪತಿ ವಿರುದ್ದ ಅಕ್ರಮ ಭೂ ಕಬಳಿಕೆ ಆರೋಪ ಕೇಳಿ ಬಂದಿದ್ದು, ಹಾಸ್ಯನಟ ಮಹಮೂದ್ ಅಲಿ ಪುತ್ರ ಲಕ್ಕಿ ಅಲಿ ದೂರು ದಾಖಲಿಸಿದ್ದಾರೆ.
ಟ್ವೀಟ್ ಮೂಲಕ ಅಲಿ ಅವರು ಬೆಂಗಳೂರು ಪೊಲೀಸ್ ಆಯುಕ್ತ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಟ್ವೀಟ್ ಮಾಡಿದ್ದು, ಸುಧೀರ್ ರೆಡ್ಡಿ ಹಾಗು ಮಧು ರೆಡ್ಡಿ ಎಂಬುವವರಿಂದ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
ಯಲಹಂಕ ಬಳಿ ಇರುವ ಕೆಂಚೇನಹಳ್ಳಿ ಬಳಿಯ ಲಕ್ಕಿ ಆಲಿ ಅವರ ಜಾಗವನ್ನು ತಮ್ಮ ಪತ್ನಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ಸಹಾಯದಿಂದ ಒತ್ತುವರಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ .
ಆದರೆ ಈ ಕುರಿತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಅಂತೆಯೇ ದೂರಿನ ಸಂಬಂಧ ಪೊಲೀಸ್ ಇಲಾಖೆ ಕೂಡ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!