ಮೋದಿ ಸಲಹೆಗಾರನಾಗಿ ಐಎಎಸ್‌ ಅಧಿಕಾರಿ ತರುಣ್‌ ಕಪೂರ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಲಹೆಗಾರನಾಗಿ ಐಎಎಸ್‌ ಅಧಿಕಾರಿ ತರುಣ್‌ ಕಪೂರ್ ನೇಮಕಗೊಂಡಿದ್ದಾರೆ. ಅವರು ಈ ಹಿಂದೆ ಇಂಧನ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಹಿಮಾಚಲ ಪ್ರದೇಶ ಕೇಡರ್‌ನ 1987ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಅವರಿಗೆ ಭಾರತ ಸರ್ಕಾರದ ಕಾರ್ಯದರ್ಶಿ ಶ್ರೇಣಿಯನ್ನು ನೀಡಿ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಸಲಹೆಗಾರನಾಗಿ ನೇಮಕ ಮಾಡಲಾಗಿದೆ. ಜೊತೆಗೆ ಹಿರಿಯ ಅಧಿಕಾರಿ ಹರಿ ರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಪಿಎಂಒ ದಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!