ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.
ಭಾರತದಾದ್ಯಂತ ಒಟ್ಟು 6035 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 2022ರಲ್ಲಿ ನಡೆಸಲಾದ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಾಗಿದೆ.
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.