ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ವಜಾ? ಹೀಗೊಂದು ಪತ್ರ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗೆಗೆ ಸಿ.ಎಂ.ಇಬ್ರಾಹಿಂ ನೀಡಿರುವ ಹೇಳಿಕೆ ಬೆನ್ನಲ್ಲೇ ಪಕ್ಷದಿಂದ ಅವರನ್ನು ವಜಾಗೊಳಿಸಿರುವ ಪತ್ರವೊಂದು ಸಖತ್‌ ವೈರಲ್‌ ಆಗುತ್ತಿದೆ.

ಇಬ್ರಾಹಿಂ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಆದೇಶವಿರುವ ಪತ್ರ ನಕಲಿ ಎನ್ನಲಾಗುತ್ತಿದ್ದು, ಈ ಪತ್ರ ಜೆಡಿಎಸ್​ ವರಿಷ್ಠ ದೇವೇಗೌಡರ ಹೆಸರಿನಲ್ಲಿದೆ.

ಸೋಮವಾರ ನಡೆದ ಜೆಡಿಎಸ್‌ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿ.ಎಂ.ಇಬ್ರಾಹಿಂ, ತಮ್ಮ ಬೆಂಬಲ ಐ.ಎನ್‌.ಡಿ.ಐ.ಎ. ಮೈತ್ರಿಕೂಟಕ್ಕೆ, ನಾವೇ ಒರಿಜಿನಲ್‌ ಜೆಡಿಎಸ್ ಎಂಬ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆ ಬೆನ್ನಲ್ಲೇ ಕುಮಾರಸ್ವಾಮಿ ಇಬ್ರಾಹಿಂ ವಿರುದ್ಧ ಕಿಡಿ ಕಾರಿದ್ದು, ತಾವು ಒರಿಜಿನಲ್‌ ಜೆಡಿಎಸ್‌ ಎಂದು ಬೋರ್ಡ್‌ ಹಾಕಿಕೊಳ್ಳಲಿ ಎಂದು ತಿರುಗೇಟು ನೀಡಿದ್ರು. ವಾದ-ಪ್ರತಿವಾದದ ಬೆನ್ನಲ್ಲೇ ವಜಾಗೊಳಿಸಿದ ಪತ್ರವೊಂದು ಸುದ್ದಿ ಮಾಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!