ಐಸಿಸಿ ವಾರ್ಷಿಕ ರ‍್ಯಾಂಕಿಂಗ್: ಟಿ20ಯಲ್ಲಿ ಭಾರತ ನಂಬರ್​ 1, ಟೆಸ್ಟ್​ನಲ್ಲಿ ಆಸೀಸ್​, ODIನಲ್ಲಿ ಕಿವೀಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಟಿ20ಯಲ್ಲಿ 2021-22ನೇ ಆವೃತ್ತಿಯನ್ನು ನಂಬರ್​ 1 ತಂಡವಾಗಿದ್ದು, ಟೆಸ್ಟ್​ ಕ್ರಿಕೆಟ್​ನಲ್ಲಿ 2 ಮತ್ತು ಏಕದಿನ ಕ್ರಿಕೆಟ್​​ನಲ್ಲಿ 4ನೇ ಸ್ಥಾನ ಪಡೆದಿದೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡ, 270 ರೇಟಿಂಗ್ ಅಂಕ ಪಡೆದು ಅಗ್ರಸ್ಥಾನ ಉಳಿಸಿಕೊಂಡಿದೆ. 2ನೇ ಸ್ಥಾನದಲ್ಲಿ ಇಂಗ್ಲೆಂಡ್​(265) ಮತ್ತು 3ನೇ ಸ್ಥಾನದಲ್ಲಿ ಪಾಕಿಸ್ತಾನ (261) ತಂಡವಿದೆ.
ನ್ಯೂಜಿಲ್ಯಾಂಡ್​ ಏಕದಿನ ಕ್ರಿಕೆಟ್​​ನಲ್ಲಿ ನಂಬರ್ 1 ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ 2 ಮತ್ತು 3ನೇ ಸ್ಥಾನ ಪಡೆದಿವೆ. ಟೆಸ್ಟ್​ ಶ್ರೇಯಾಂಕದಲ್ಲಿ ಮುಂದೂಡಲ್ಪಟ್ಟಿರುವ ಭಾರತ ಮತ್ತು ಇಂಗ್ಲೆಂಡ್​ ನಡುವಿನ ಸರಣಿ ಕಳೆದ ಆವೃತ್ತಿಗೆ ಒಳಪಟ್ಟಿದ್ದರೂ, ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿರುವ ಭಾರತ ತಂಡಕ್ಕಿಂತ 9 ಅಂಕ ಮುಂದಿರುವ ಕಾರಣ ನಂಬರ್ 1 ತಂಡವಾಗಿ ಘೋಷಿಸಲಾಗಿದೆ.
ಪಾಕಿಸ್ತಾನ ತಂಡ ಇಂಗ್ಲೆಂಡ್​ ತಂಡವನ್ನು ಹಿಂದಿಕ್ಕಿ ಇಂದು ಬಿಡುಗಡೆಯಾದ ವಾರ್ಷಿಕ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಅಲಂಕರಿಸಿದೆ. 3 ಮತ್ತು 4ರಲ್ಲಿ ನ್ಯೂಜಿಲ್ಯಾಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!