ಹೊಸದಿಗಂತ ಡಿಜಿಟಲ್ ಡೆಸ್ಕ್;
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯಲ್ಲಿ ಭಾಗವಹಿಸಲು, ಭಾರತ ಕ್ರಿಕೆಟ್ ತಂಡದ ಮೊದಲ ಬ್ಯಾಚ್ ದುಬೈಗೆ ಪ್ರಯಾಣ ಬೆಳೆಸಿದೆ.
ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್, ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಆಲ್‌ರೌಂಡರ್ ರವೀಂದ್ರ ಜಡೇಜಾ ಸೇರಿದಂತೆ, ಇನ್ನೀತರ ಆಟಗಾರರು ದುಬೈಗೆ ಪ್ರಯಾಣ ಬೆಳೆಸಿದರು.
ಇಂದು ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೀಂ ಇಂಡಿಯಾದ ಮೊದಲ ಬ್ಯಾಚ್ ದುಬೈಗೆ ಪ್ರಯಾಣ ಬೆಳೆಸಿತು. ಇನ್ನು ವಿಮಾನ ನಿಲ್ದಾಣದಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ಕಂಡು ಕ್ರೀಡಾಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಬನ್ನಿ ಎಂದು ಶುಭಹಾರೈಸಿದರು.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19(ಬುಧವಾರ)ರಂದು ಆರಂಭವಾಗಲಿದ್ದು, ಮಾರ್ಚ್ 9ರವರೆಗೆ ನಡೆಯಲಿದೆ. ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ.