ಶುಭ್‌ಮನ್ ಗಿಲ್ ಗೆ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ: ತೆಂಡುಲ್ಕರ್ ಪುತ್ರಿ ಫುಲ್ ಹ್ಯಾಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾ ಬ್ಯಾಟರ್ ಶುಭ್‌ಮನ್ ಗಿಲ್ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಒಲಿದು ಬಂದಿದ್ದು, ಇದರ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಪುತ್ರಿ ಕುಣಿದು ಕುಪ್ಪಳಿಸಿದ್ದು,ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಶೇರ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್‌, ಸಹ ಆಟಗಾರ ಮೊಹಮ್ಮದ್ ಸಿರಾಜ್, ಹಾಗೂ ಇಂಗ್ಲೆಂಡ್ ಓಪನ್ನರ್ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಇದು 2023ರಲ್ಲೇ ಶುಭ್‌ಮನ್ ಗಿಲ್ ಪಾಲಾದ ಎರಡನೇ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಯಾಗಿದೆ.

ಇನ್ನು ಶುಭ್‌ಮನ್ ಗಿಲ್ ಅವರಿಗೆ ಈ ಪ್ರಶಸ್ತಿ ಸಿಗುತ್ತಿದ್ದಂತೆಯೇ ಟ್ವೀಟ್ ಮಾಡಿದ ಸಾರಾ ತೆಂಡುಲ್ಕರ್, ಐಸಿಸಿ ತಿಂಗಳ ಪ್ರಶಸ್ತಿ ಜಯಿಸಿದ್ದಕ್ಕೆ ಅಭಿನಂದನೆಗಳು. ವಿಶ್ವ ಕ್ರಿಕೆಟ್‌ನ ರಾಜ ಶುಭ್‌ಮನ್ ಗಿಲ್ ಎಂದು ಅವರ ಫೋಟೋವನ್ನು ಶೇರ್ ಮಾಡಿದ್ದಾರೆ. ಇದರ ಜತೆಗೆ ಭಾರತದ ಧ್ವಜ ಹಾಗೂ ನೀಲಿ ಬಣ್ಣದ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ.

2023ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶುಭ್‌ಮನ್ ಗಿಲ್ 5 ಶತಕ ಸಹಿತ 1230 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ಗಿಲ್, ಏಕದಿನ ವಿಶ್ವಕಪ್ ಟೂರ್ನಿಯ ಮೊದಲೆರಡು ಪಂದ್ಯಗಳಿದ ಆಡವ ಹನ್ನೊಂದರ ಬಳಗದಿಂದ ಹೊರಬಿದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!