ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮುವುದರೊಂದಿಗೆ ಟೂರ್ನಿಗೆ ತೆರೆ ಬಿದ್ದಿದೆ. ಇದೀಗ ಐಸಿಸಿ, ಈ ಚುಟುಕು ವಿಶ್ವಕಪ್ ಟೂರ್ನಿಯ ಬಲಿಷ್ಠ ತಂಡವನ್ನು ಪ್ರಕಟಿಸಿದ್ದು, ಆರು ಭಾರತೀಯರಿಗೆ ಸ್ಥಾನ ಕಲ್ಪಿಸಿದೆ.
ಈ ಆಟಗಾರರ ಪಟ್ಟಿಯಲ್ಲಿ ಫೈನಲ್ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿಗೆ ಸ್ಥಾನ ನೀಡಿಲ್ಲ. ಟೀಂ ಇಂಡಿಯಾದ 6 ಆಟಗಾರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ.
ಪ್ರತಿ ಕ್ರಿಕೆಟ್ ಟೂರ್ನಿ ಮುಗಿದ ಬಳಿಕ ಐಸಿಸಿ ಡ್ರೀಮ್ ತಂಡವನ್ನು ಪ್ರಕಟಿಸುತ್ತದೆ. ಟೂರ್ನಿಯುದ್ಧಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪೈಕಿ ಕೇವಲ 12 ಮಂದಿಯನ್ನು ಮಾತ್ರ ಅಂತಿಮವಾಗಿ ಐಸಿಸಿ ಆಯ್ಕೆ ಮಾಡುತ್ತದೆ.