ಐಸಿಸಿ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿ: ರವೀಂದ್ರ ಜಡೇಜಾ ನಾಮನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ(Ravindra Jadeja), ಇಂಗ್ಲೆಂಡ್​ ತಂಡದ ಹ್ಯಾರಿ ಬ್ರೂಕ್(Harry Brook)​ ಮತ್ತು ವಿಂಡೀಸ್​ ತಂಡದ ಗುಡಾಕೇಶ್ ಮೋತಿ(Gudakesh Motie) ಐಸಿಸಿ(ICC Awards) ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಯಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಪುನರಾಗಮನ ಮಾಡಿಕೊಂಡ ರವೀಂದ್ರ ಜಡೇಜಾ ಇದುವರೆಗೆ ಆಡಿದ 3 ಪಂದ್ಯಗಳಿಂದ 21 ವಿಕೆಟ್​ಗಳನ್ನು ಪಡೆದಿದ್ದಾರೆ. ಇದರಲ್ಲಿ 17 ವಿಕೆಟ್​ಗಳು ಫೆಬ್ರವರಿಯಲ್ಲಿ ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಬಂದಿದೆ.

ಈ ಪಟ್ಟಿಯಲ್ಲಿರುವ ಇಂಗ್ಲೆಂಡ್​ನ ಯುವ ಬ್ಯಾಟರ್​ ಹ್ಯಾರಿ ಬ್ರೂಕ್ ಎರಡನೇ ಸ್ಥಾನದಲ್ಲಿದ್ದಾರೆ. ಅವರು ಕಳೆದ ಕಿವೀಸ್​ ವಿರುದ್ಧ ಆಡಿದ ಎರಡು ಟೆಸ್ಟ್ ಪಂದ್ಯಗಳಲ್ಲಿ 1 ಶತಕ ಮತ್ತು 2 ಅರ್ಧ ಶತಕಗಳ ಬಾರಿಸಿ ಮಿಂಚಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!