ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್‌ನಲ್ಲಿ ಅಭೂಪೂರ್ವ ಪ್ರದರ್ಶನ ನೀಡುತ್ತಿರುವ ನ್ಯೂಜಿಲೆಂಡ್‌ನ ಯುವ ಕ್ರಿಕೆಟಿಗ ರಚಿನ್ ರವೀಂದ್ರ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಚಿನ್ ಜೊತೆ ಪ್ರಶಸ್ತಿ ರೇಸ್‌ನಲ್ಲಿ ಭಾರತದ ಪ್ರಮುಖ ವೇಗಿ ಜಸ್‌ಪ್ರೀತ್ ಬೂಮ್ರಾ, ದ.ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಕೂಡಾ ಇದ್ದರು. ಮಹಿಳೆಯರ ವಿಭಾಗದಲ್ಲಿ ವೆಸ್ಟ್‌ಇಂಡೀಸ್‌ನ ಹೇಲಿ ಮ್ಯಾಥ್ಯೂಸ್ ತಿಂಗಳ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದ ರಚಿನ್ ರವೀಂದ್ರ, ಆ ಬಳಿಕವೂ ಸ್ಥಿರ ಪ್ರದರ್ಶನ ತೋರಿ ಮಿಂಚುತ್ತಿದ್ದಾರೆ. ಇದುವರೆಗೂ ನ್ಯೂಜಿಲೆಂಡ್ ಪರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಎಲ್ಲಾ 9 ಪಂದ್ಯಗಳನ್ನಾಡಿ ಮೂರು ಶತಕ ಸಹಿತ 565 ರನ್ ಸಿಡಿಸಿದ್ದಾರೆ.