ಐಸಿಸಿ ನೂತನ ಟೆಸ್ಟ್ ಬೌಲರ್ ರ‍್ಯಾಂಕಿಂಗ್: ಅಗ್ರಸ್ಥಾನದಲ್ಲಿ ಅಶ್ವಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್

ಐಸಿಸಿ ನೂತನ ಟೆಸ್ಟ್ ಬೌಲರ್​ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಕಳೆದ ಬಾರಿ ಅಶ್ವಿನ್ ಅವರೊಂದಿಗೆ 859 ಪಾಯಿಂಟ್​ಗಳನ್ನು ಕಲೆಹಾಕಿ ಸಮಬಲ ಸಾಧಿಸಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಈ ಬಾರಿ ಹಿಂದೆ ಉಳಿದಿದ್ದಾರೆ. ಇತ್ತ ಪಾಯಿಂಟ್​ಗಳ ಏರಿಕೆಯೊಂದಿಗೆ ಅಶ್ವಿನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4 ಪಂದ್ಯಗಳಲ್ಲಿ ಒಟ್ಟು 25 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿದ್ದರು.

1. ರವಿಚಂದ್ರನ್ ಅಶ್ವಿನ್ (ಭಾರತ)- 869 ಅಂಕಗಳು

2- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)- 859 ಅಂಕಗಳು

3- ಪ್ಯಾಟ್ ಕಮಿನ್ಸ್ (ಆಸ್ಟ್ರೇಲಿಯಾ)- 841 ಅಂಕಗಳು

4- ಕಗಿಸೊ ರಬಾಡ (ಸೌತ್ ಆಫ್ರಿಕಾ)- 825 ಅಂಕಗಳು

5- ಶಾಹೀನ್ ಅಫ್ರಿದಿ (ಪಾಕಿಸ್ತಾನ್)- 787 ಅಂಕಗಳು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!