ಐಸಿಸಿ ಏಕದಿನ ರ‍್ಯಾಂಕಿಂಗ್: 2ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದ ಕೊಹ್ಲಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಏಕದಿನ ರ‍್ಯಾಂಕಿಂಗ್ ನಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್​ ಕೊಹ್ಲಿ 2ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪಾಕಿಸ್ತಾನದ ನಾಯಕ ಬಾಬರ್ ಅಜಮ್​​ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 801 ಅಂಕಗಳೊಂದಿಗೆ ರಾಸ್​ ಟೇಲರ್​ ಜೊತೆಗೆ ಜಂಟಿ 3ನೇ ಸ್ಥಾನದಲ್ಲಿದ್ದಾರೆ.
ಡಿಕಾಕ್​ 5ನೇ ಸ್ಥಾನಕ್ಕೇರಿದರೆ, ಶತಕ ಸಹಿತ 218 ರನ್​ಗಳಿಸಿದ ವ್ಯಾನ್ ಡರ್​ ಡಸೆನ್​ 10 ಸ್ಥಾನ ಏರಿಕೆ ಕಂಡಿದ್ದಾರೆ.
ಬೌಲಿಂಗ್ ಶ್ರೇಯಾಂಕದಲ್ಲಿ ನ್ಯೂಜಿಲ್ಯಾಂಡ್​ನ ಟ್ರೆಂಟ್​ ಬೌಲ್ಟ್​ ಮತ್ತು ಆಸ್ಟ್ರೇಲಿಯಾದ ಜೋಶ್ ಹೆಜಲ್​ವುಡ್​ ಅಗ್ರ 2ರಲ್ಲಿ ಮುಂದುವರಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!