ಹೊಸದಿಗಂತ ಡಿಜಿಟಲ್ ಡೆಸ್ಕ್;
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಹೊಸ ಏಕದಿನ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಇವರ ಸಹ ಆಟಗಾರ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಅಗ್ರ ಸ್ಥಾನವನ್ನು ಸುಭದ್ರವಾಗಿ ಕಾಪಾಡಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಅವರು ಇದೀಗ ಎರಡು ಸ್ಥಾನಕ್ಕೆ ಪ್ರವೇಶ ಮಾಡುವ ಮೂಲಕ 773 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ರೋಹಿತ್ ಶರ್ಮಾ 781 ಅಂಕಗಳೊಂದಿಗೆ ತಮ್ಮ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಡ್ಯಾರಿಲ್ ಮಿಚೆಲ್ 766 ಅಂಕಗಳೊಂದಿಗೆ ಒಂದು ಸ್ಥಾನ ಕುಸಿದು ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಇಬ್ರಾಹಿಂ ಝರ್ಡಾನ್ (764) ನಾಲ್ಕನೇ ಸ್ಥಾನದಲ್ಲಿದ್ದರೆ, ಶುಭಮನ್ ಗಿಲ್ (723) ಐದನೇ ಶ್ರೇಯಾಂಕದಲ್ಲಿದ್ದಾರೆ.

