ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಏಕದಿನ ವಿಶ್ವಕಪ್ 2023ರ ಸೆಮಿಫೈನಲ್ಗೆ ಲಗ್ಗೆ ಇಟ್ಟಿರುವ ಭಾರತವು ಇಂದು ದಕ್ಷಿಣ ಆಫ್ರಿಕಾ ತಂಡದೊಂದಿಗಿನ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ವಿಶ್ವಕಪ್ 2023ರ 37ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಅದಕ್ಕೂ ಮುನ್ನ 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ರೋಚಕ ಪಂದ್ಯ ಇದಾಗಿದ್ದು, ಗೆಲುವಿನ ಓಟ ಮುಂದುವರೆಸಲು ಭಾರತ ಕಾತರದಿಂದಿದೆ.