ICC Rank | ನಂಬರ್ 1 ಬೌಲರ್ ಪಟ್ಟಕ್ಕೇರಿದ ಕೇಶವ್ ಮಹಾರಾಜ್! ಟೀಮ್ ಇಂಡಿಯಾ ಆಟಗಾರರಿಗೆ ಎಷ್ಟನೇ ಪ್ಲೇಸ್?

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ತನ್ನ ಇತ್ತೀಚಿನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಅದರಲ್ಲಿ ದೊಡ್ಡ ಬದಲಾವಣೆಯಾಗಿದೆ. ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ತಮ್ಮ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ವಿಶ್ವದ ನಂಬರ್ ಒನ್ ಬೌಲರ್ ಸ್ಥಾನಕ್ಕೇರಿದ್ದಾರೆ.

ಮಹಾರಾಜ್ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕೇವಲ 33 ರನ್‌ಗಳಿಗೆ ಐದು ವಿಕೆಟ್ ಕಬಳಿಸಿ ತನ್ನ ವೃತ್ತಿಜೀವನದ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದರು. ಇದೇ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಆಯ್ಕೆಯಾಗಿದರು. ಇದರಿಂದ ಅವರು ಎರಡು ಸ್ಥಾನಗಳ ಏರಿಕೆ ಕಂಡು ನಂಬರ್ 1 ಸ್ಥಾನಕ್ಕೇರಿದ್ದಾರೆ.

ಈ ಸಾಧನೆಯೊಂದಿಗೆ ಕೇಶವ್ ಮಹಾರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 300ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದು ದಕ್ಷಿಣ ಆಫ್ರಿಕಾದ ಇತಿಹಾಸದಲ್ಲಿ ವಿಶೇಷ ಸ್ಥಾನ ಗಳಿಸಿದ್ದಾರೆ. ಇಮ್ರಾನ್ ತಾಹಿರ್ 291 ವಿಕೆಟ್‌ಗಳಲ್ಲಿ ನಿಂತಿದ್ದರೆ, ಮಹಾರಾಜ್ ಈಗಾಗಲೇ 304 ವಿಕೆಟ್‌ಗಳನ್ನು ಕಲೆಹಾಕಿದ್ದಾರೆ.

ಈ ಬದಲಾವಣೆಯ ಪರಿಣಾಮವಾಗಿ ಶ್ರೀಲಂಕಾದ ಮಹೀಶ್ ತೀಕ್ಷಣ ಮತ್ತು ಭಾರತದ ಕುಲದೀಪ್ ಯಾದವ್ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಿಗೆ ಕುಸಿದಿದ್ದಾರೆ. ಆದರೆ ಭಾರತದ ರವೀಂದ್ರ ಜಡೇಜಾ ಇನ್ನೂ ಟಾಪ್ 10ರಲ್ಲಿ ತನ್ನ ಸ್ಥಾನ ಕಾಯ್ದುಕೊಂಡಿದ್ದಾರೆ. ಇನ್ನು ಭಾರತದ ವೇಗಿ ಬೌಲರ್‌ಗಳಾದ ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಕ್ರಮವಾಗಿ 13, 14 ಮತ್ತು 15ನೇ ಸ್ಥಾನಗಳಲ್ಲಿ ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!