ಐಸಿಸಿ Rank: ಟೆಸ್ಟ್‌ನಲ್ಲಿ ಮೊದಲ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ತಂಡದ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿದೆ.

ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್‌ಗಳ ಸರಣಿಯನ್ನು ಭಾರತ ಗೆದ್ದುಕೊಂಡಿತ್ತು, ಈ ಕಾರಣದಿಂದಾಗಿ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಪಟ್ಟ ಅಲಂಕರಿಸಿದೆ.

ಇದಕ್ಕೂ ಮೊದಲು ಆಸ್ಟ್ರೇಲಿಯಾ ನಂಬರ್ ಒನ್ ಸ್ಥಾನದಲ್ಲಿತ್ತು. ಭಾರತ 3690 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ.
ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡ 3,231 ಅಂಕಗಳು ಹಾಗೂ 111 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಮೂರನೇ ಹಾಗೂ ನ್ಯೂಜಿಲೆಂಡ್ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿವೆ.

ಇತ್ತ ಭಾರತ ತಂಡ ಟಿ20 ಹಾಗೂ ಟೆಸ್ಟ್‌ನಲ್ಲಿ ನಂಬರ್ 1 ಎನಿಸಿಕೊಂಡಿದೆ. ಪ್ರಸ್ತುತ ಏಕದಿನ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!