ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಏಕದಿನ ಮತ್ತು ಟಿ20 ಬ್ಯಾಟರ್ಗಳ ನೂತನ ರ‍್ಯಾಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ 6 ಬ್ಯಾಟರ್ಗಳು ಸ್ಥಾನ ಪಡೆದಿರುವುದು ವಿಶೇಷ. ಅಂದರೆ ಏಕದಿನ ಬ್ಯಾಟರ್ಗಳ ಪಟ್ಟಿಯಲ್ಲಿ ಮೂವರು ಭಾರತೀಯರು ಸ್ಥಾನ ಪಡೆದರೆ, ಟಿ20 ಬ್ಯಾಟ್ಸ್ಮನ್ಗಳ ಅಗ್ರ ಹತ್ತರ ಪಟ್ಟಿಯಲ್ಲಿ ಮೂವರು ಕಾಣಿಸಿಕೊಂಡಿದ್ದಾರೆ.ಯಾರೆಲ್ಲಾ ನೋಡಿ..
ರೋಹಿತ್ ಶರ್ಮಾ (ಏಕದಿನ): ಏಕದಿನ ಕ್ರಿಕೆಟ್ನ ಬ್ಯಾಟರ್ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
ಶುಭ್ಮನ್ ಗಿಲ್ (ಏಕದಿನ): ಭಾರತ ತಂಡದ ಉಪನಾಯಕ ಶುಭ್ಮನ್ ಗಿಲ್ ಏಕದಿನ ಬ್ಯಾಟರ್ಗಳ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ (ಏಕದಿನ): ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಬಾರಿಯ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸೂರ್ಯಕುಮಾರ್ ಯಾದವ್ (ಟಿ20): ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್ಗಳ ರ್ಯಾಕಿಂಗ್ನಲ್ಲಿ ದ್ವಿತೀಯ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಯಶಸ್ವಿ ಜೈಸ್ವಾಲ್ (ಟಿ20): ಭಾರತ ತಂಡದ ಎಡಗೈ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಟಿ20 ಬ್ಯಾಟರ್ಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ.
ರುತುರಾಜ್ ಗಾಯಕ್ವಾಡ್ (ಟಿ20): ಟೀಮ್ ಇಂಡಿಯಾದ ಯುವ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ರೋಹಿತ್ ಶರ್ಮಾ (ಟೆಸ್ಟ್): ಐಸಿಸಿ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.