ICC T20 IND Vs BAN| ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಬಾಂಗ್ಲಾದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್‌ ನ 35ನೇ ಪಂದ್ಯವು ಭಾರತ ಹಾಗೂ ಬಾಂಗ್ಲಾದೇಶಗಳ ನಡುವೆ ನಡೆಯಲಿದ್ದು ಈಗಾಗಲೇ ಟಾಸ್‌ ಪ್ರಕ್ರಿಯೆ ಪೂರ್ಣಗೊಂಡಿದೆ.

ಟಾಸ್‌ ಗೆದ್ದ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಉಭಯ ತಂಡಗಳಿಗೂ ಈ ಪಂದ್ಯ ನಿರ್ಣಾಯಕವಾಗಲಿದ್ದು ಪಂದ್ಯವನ್ನು ಹೆದ್ದರೆ ಭಾರತದ ಸೆಮಿಸ್‌ ಹಾದಿ ಸುಲಭವಾಗಲಿದೆ.

ಅಡಿಲೇಡ್‌ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು ಭಾರತ ತಂಡದ ಪ್ಲೇಯಿಂಗ್‌ XI ನಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ದೀಪಕ್ ಹೂಡಾ ಬದಲಿಗೆ ಅಕ್ಷರ್ ಪಟೇಲ್ ತಂಡದಲ್ಲಿಂದು ಆಡಲಿದ್ದಾರೆ. ಇನ್ನು ಬಾಂಗ್ಲಾದೇಶ ತಂಡದಲ್ಲಿ ಸೌಮ್ಯ ಸರ್ಕಾರ್ ಬದಲಿಗೆ ಶೌರಿಫುಲ್ ಇಸ್ಲಾಂ ಆಡಲಿದ್ದಾರೆ.

ಭಾರತದ ಪ್ಲೇಯಿಂಗ್‌ XI
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಶ್ವಿನ್, ಭುವನೇಶ್ವರ್ ಕುಮಾರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್

ಬಾಂಗ್ಲಾ ಪ್ಲೇಯಿಂಗ್‌ XI
ನಜ್ಮುಲ್ ಹೊಸೈನ್, ಶರೀಫುಲ್ ಇಸ್ಲಾಂ, ಲಿಟನ್ ದಾಸ್, ಶಕೀಬ್ ಅಲ್ ಹಸನ್, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್, ಯಾಸಿರ್ ಅಲಿ, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್

ಅಡಿಲೇಡ್‌ ನಲ್ಲಿ ಕೊಹ್ಲಿ ಅಬ್ಬರಕ್ಕಿಲ್ಲ ಸಾಟಿ

ಅಡಿಲೇಡ್ ಓವಲ್‌ ಮೈದಾನದಲ್ಲಿ ವಿರಾಟ್‌ ಕೊಹ್ಲಿ ಮಿಂಚಿನ ಪ್ರದರ್ಶನ ನೀಡಿದ್ದು ಇಲ್ಲಿಯವರೆಗೆ 3 ತಂಡಗಳನ್ನು ಬಗ್ಗು ಬಡಿದಿದ್ದಾರೆ. ಬಾಂಗ್ಲಾ 4 ನೇ ತಂಡವಾಗಲಿದೆಯಾ ಎಂದು ಕಾದು ನೋಡಬೇಕಿದೆ. ವಿರಾ ಕೊಹ್ಲಿ ಇದುವರೆಗೆ ಅಡಿಲೇಡ್‌ನಲ್ಲಿ ಆಡಿರುವ 9 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 5 ಶತಕ ಸಿಡಿಸಿದ್ದಾರೆ. ಇದು ಒಂದೇ ಸ್ಥಳದಲ್ಲಿ ಬ್ಯಾಟ್ಸ್‌ಮನ್ ಗಳಿಸಿದ ಅತಿ ಹೆಚ್ಚು ಶತಕಗಳಾಗಿವೆ.

ಭಾರತ ತಂಡದ ಪರವಾಗಿ ಕೆ ಎಲ್‌ ರಾಹುಲ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಓಪ್ನರ್‌ ಗಳಾಗಿ ಕ್ರೀಸ್‌ ಗೆ ಇಳಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!