ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಟಿ 20 ಅಂತಾರಾಷ್ಟ್ರೀಯ Ranking ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತಂಡ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ. ಐಸಿಸಿ ಟೆಸ್ಟ್ Ranking ನಲ್ಲಿ ಭಾರತ ತಂಡ ನಂಬರ್ 1 ಸ್ಥಾನದಲ್ಲಿದೆ. ಏಕದಿನ Ranking ನಲ್ಲಿ ಎರಡನೇ ಸ್ಥಾನದಲ್ಲಿದೆ.
ಆಸ್ಟ್ರೇಲಿಯಾ ಇತ್ತೀಚೆಗೆ ಐದು ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ 3-2ರಿಂದ ಸೋಲನುಭವಿಸಿದ್ದು, . ಹಾಗಾಗಿ ಆಸ್ಟ್ರೇಲಿಯಾ ತಂಡ Ranking ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯಾ, ಭಾರತಕ್ಕಿಂತ ಒಂದು ಪಾಯಿಂಟ್ ಹಿಂದಿದೆ. ಇಂಗ್ಲೆಂಡ್ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ ಭಾರತಕ್ಕಿಂತ ಏಳು ಪಾಯಿಂಟ್ ಮುಂದಿದೆ.
ಆಸ್ಟ್ರೇಲಿಯಾದ ನಾಯಕ ಆರೋನ್ ಫಿಂಚ್ ಟಿ 20 ಅಂತಾರಾಷ್ಟ್ರೀಯ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಫಿಂಚ್ ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದರು. ಟೀಮ್ ಇಂಡಿಯಾ ಬ್ಯಾಟ್ಸ್ ಮನ್ ಕೆ.ಎಲ್.ರಾಹುಲ್ ಒಂದು ಸ್ಥಾನ ಕಳೆದುಕೊಂಡು ಮೂರನೇ ಸ್ಥಾನಕ್ಕಿಳಿದಿದ್ದಾರೆ. ಭಾರತದ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.