Sunday, December 4, 2022

Latest Posts

ICC T20 Ranking: ಟೀಮ್ ಇಂಡಿಯಾದ ಸೂರ್ಯಕುಮಾರ್‌ ಯಾದವ್‌ ಟಾಪ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಟಿ20 ವಿಶ್ವಕಪ್‌ ನಲ್ಲಿ ಟೀಮ್ ಇಂಡಿಯಾ ಸೆಮಿಯಲ್ಲಿ ಸೋತು ಹೊರಹೋಗಿತ್ತು. ಆದರೆ ಟೂರ್ನಿಯುದ್ದಕ್ಕೂ ಭಾರತದ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ ಸೂರ್ಯಕುಮಾರ್‌ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಐಸಿಸಿ ಪಟ್ಟಿಯಲ್ಲಿ ಅವರ ರೇಟಿಂಗ್‌ 869 ಇದೆ.

ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್‌ನ ಅಲೆಕ್ಸ್ ಹೇಲ್ಸ್ 47 ಎಸೆತಗಳಲ್ಲಿ ಅಜೇಯ 86 ರನ್ ಗಳಿಸಿ 22 ಸ್ಥಾನ ಮೇಲೇರಿ 12ನೇ ಸ್ಥಾನಕ್ಕೆ ತಲುಪಿದ್ದಾರೆ. ಟಾಪ್‌ 10 ಪಟ್ಟಿಯಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಒಂದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ದಕ್ಷಿಣ ಆಫ್ರಿಕಾದ ರಿಲೆ ರೊಸ್ಸೊ ಏಳನೇ ಸ್ಥಾನಕ್ಕೆ ಏರಿದರೆ, ನ್ಯೂಜಿಲೆಂಡ್‌ನ ಗ್ಲೆನ್ ಫಿಲಿಪ್ಸ್ 8ನೇ ಸ್ಥಾನಕ್ಕೆ ಕುಸಿದರು. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಎರಡನೇ ಸ್ಥಾನದಲ್ಲಿ ಮತ್ತು ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಐದನೇ ಸ್ಥಾನದಲ್ಲಿ ಮುಂದುವರಿದರೆ, ಡೆವೊನ್ ಕಾನ್ವೇ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬೌಲರ್‌ಗಳ ಪೈಕಿ ಶ್ರೀಲಂಕಾದ ವನಿಂದು ಹಸರಂಗಾ ಅಗ್ರಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನದ ರಶೀದ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ.ಇಂಗ್ಲೆಂಡ್‌ನ ಆದಿಲ್ ರಶೀದ್ ಐದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಸ್ಯಾಮ್ ಕರ್ರಾನ್ ಎರಡು ಸ್ಥಾನ ಮೇಲೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಆಲ್‌ರೌಂಡರ್‌ಗಳ ಪೈಕಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅಗ್ರಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಎರಡನೇ ಮತ್ತು ಭಾರತದ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!